ಆಟೋ, ಟ್ಯಾಕ್ಸಿ ಚಾಲಕರರು ಸರ್ಕಾರದ 5000ರೂ. ಹಣ ಹೇಗೆ ಪಡೆಯುವುದು ಎನ್ನುವ ಗೊಂದಲಗಳಿಗೆ  ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತೆರೆ ಎಳೆದಿದ್ದಾರೆ. ಹಾಗಾದ್ರೆ, ಆಟೋ, ಕ್ಯಾಬ್ ಚಾಲಕರು 5000 ರೂ. ಪಡೆಯುವುದು ಹೇಗೆ? ಯಾವೆಲ್ಲಾ ಚಾಲಕರು ಇದಕ್ಕೆ ಅರ್ಹರು ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ

ಕೊರೊನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿರುವ ಆಟೋ, ಟ್ಯಾಕ್ಸಿ ಚಾಲಕರು ಮುಖ್ಯಮಂತ್ರಿಗಳು ಘೋಷಿಸಿರುವ ಪರಿಹಾರ ಹಣ ಸ್ವೀಕರಿಸಲು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಘೋಷಿಸಿರುವ 5000 ರೂ.ಪರಿಹಾರಕ್ಕಾಗಿ ಯಾರೂ ಅಂಚೆ ಕಚೇರಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ಪರಿಹಾರ ಧನ ನೀಡಲು ಅರ್ಜಿಗಳನ್ನು ಆನ್‌ಲೈನ್‌ಗಳಲ್ಲಿ  ಸೇವಾ ಸಿಂಧು ಜಾಲತಾಣದ () ಮೂಲಕ ಸ್ವೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತಿಳಿಸಿದ್ದಾರೆ.

ಆಟೋ ರಿಕ್ಷಾ ಚಾಲಕರು ಅರ್ಜಿಗಳನ್ನು ಸಲ್ಲಿಸಲು ಅನವಶ್ಯಕವಾಗಿ ಪರಿಶ್ರಮ ಪಡುವ ಅಗತ್ಯವಿಲ್ಲ. ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು. ಎಲ್ಲರೂ ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಅದನ್ನು ಹೊರತು ಬೇರೆ ಯಾವುದೇ ರೂಪದಲ್ಲಿ ಸಲ್ಲಿಸಲಾಗುವ ಅರ್ಜಿ ಸ್ವೀಕೃತವಲ್ಲ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಹಾಗಾದ್ರೆ ಇದಕ್ಕೆ ಯಾವೆಲ್ಲಾ ಚಾಲಕರು ಅರ್ಹರಾಗಿರುತ್ತಾರೆ ಎನ್ನುವ ಮಾಹಿತಿ ಈ ಕೆಳಗನಂತಿದೆ ನೋಡಿ.

ಯಾರೆಲ್ಲಾ ಚಾಲಕರು ಅರ್ಹರು?
1. ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲನೆ ಮಾಡಲು ಚಾಲನಾ ಅನುಜ್ಞಾ ಪತ್ರ ಮತ್ತು ಬ್ಯಾಡ್ಜ್ ಹೊಂದಿರುವವರು ಮಾತ್ರ ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.
2. ಫಲಾನುಭವಿಗಳು ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಾಗಿದ್ದು, ದಿನಾಂಕ: 01-03-2020 ಕ್ಕೆ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಪೋರ್ಟಲ್ ನಲ್ಲಿ ನಮೂದಿಸಬೇಕಾಗಿರುತ್ತದೆ.
3. ಚಾಲಕರ ಆಧಾರ್ ಕಾರ್ಡ್ ವಿವರಗಳನ್ನು ಪೋರ್ಟಲ್‍ನಲ್ಲಿ ನಮೂದಿಸಬೇಕಾಗಿರುತ್ತದೆ.
4. ಚಾಲಕರ ಬ್ಯಾಂಕ್ ಅಕೌಂಟ್ ವಿವರ, ಸಂಬಂಧಪಟ್ಟ ಬ್ಯಾಂಕಿನ ಐಎಫ್‍ಎಸ್‍ಸಿ ಕೋಡ್, ಎಂಐಸಿಆರ್ ಕೋಡ್‍ಗಳ ವಿವರಗಳನ್ನು ಪೋರ್ಟಲ್‍ನಲ್ಲಿ ನಮೂದಿಸಬೇಕಾಗಿರುತ್ತದೆ.
5. ಚಾಲಕರು ಚಾಲನೆ ಮಾಡುವ ವಾಹನದ ನೋಂದಣಿ ಸಂಖ್ಯೆ ವಿವರಗಳನ್ನು ಪೋರ್ಟಲ್‍ನಲ್ಲಿ ನಮೂದಿಸಬೇಕಾಗಿರುತ್ತದೆ. ವಾಹನ್-4 ತಂತ್ರಾಂಶದಿಂದ ವಿವರಗಳನ್ನು ನೇರವಾಗಿ ಪಡೆಯುವುದು.
6. ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಸಾರಿಗೆ ಇಲಾಖೆಯ ಸಾರಥಿ-4 ತಂತ್ರಾಂಶದಿಂದ ನೇರವಾಗಿ ಪಡೆದುಕೊಳ್ಳಬೇಕು.
7. ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗದ ಆದಾಯ ಕಳೆದುಕೊಂಡಿರುವ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು.
8. ಈ ಯೋಜನೆಯನ್ನು ಜಾರಿಗೊಳಿಸಲು ಅರ್ಹ ಚಾಲಕರು ತಮ್ಮ ಅರ್ಜಿಗಳನ್ನು ‘ಸೇವಾಸಿಂಧು’ವಿನ ಮುಖಾಂತರ ಸಲ್ಲಿಸಲು ವ್ಯವಸ್ಥೆ ಮಾಡಬೇಕಾಗಿರುತ್ತದೆ. ಈ ಬಗ್ಗೆ ‘ಸೇವಾಸಿಂಧು’ ವಿನಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ಇ-ಆಡಳಿತ ಇಲಾಖೆಯನ್ನು ಕೋರಬಹುದಾಗಿದೆ.
9. ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಯ ಮೂಲಕ ಡಿಬಿಟಿ ಮಾಡಬೇಕು ಅಥವಾ ಆನ್‍ಲೈನ್ ಮೂಲಕ ಬ್ಯಾಂಕಿಗೆ ಜಮಾ ಮಾಡಬೇಕು.
10. ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಲು ಅನುವಾಗುವಂತೆ ಅರ್ಹ/ಅನರ್ಹ ಅರ್ಜಿದಾರರ ಪಟ್ಟಿಯನ್ನು ತಂತ್ರಾಂಶದಲ್ಲಿ ಅಳವಡಿಸಿಕೊಳ್ಳಬೇಕು.


ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ 

seva sindhu apply 5000 Rs

Post a Comment

أحدث أقدم